ಕಟಪಾಡಿ: ಎಸ್.ವಿ.ಕೆ./ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ಸಂಚಾಲಕರಾದ ಕೆ. ಸತ್ಯೇಂದ್ರ ಪೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುಜಾ ಡಿ ಸೋಜಾ ಆಡಳಿತ ಮಂಡಳಿ ಸದಸ್ಯರಾದ ಗಣೇಶ್ ಕಿಣಿ ಹಾಗೂ AEO ಸುಧಾಕರ್ ಬ್ರಹ್ಮಾವರ ಉಪಸ್ಥಿತರಿದ್ದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಹಾರ ಅರ್ಪಿಸಿ ಗೌರವ ಸಲ್ಲಿಸಲಾಯಿತು.

ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.







