ವೇಣೂರು: ಇಲ್ಲಿನ ಯುವ ಸೇವಾ ಸಂಗಮ ಸೇವಾ ಟ್ರಸ್ಟ್ (ರಿ.) ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಶಿವರಾಮ್ ಹೆಗ್ಡೆ ಹಾಗೂ ಶೀಲಾ ಎಸ್. ಹೆಗ್ಡೆ ದಂಪತಿಯನ್ನು ಸನ್ಮಾನಿಸಿ, ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ನಿವೃತ್ತ ಶಿಕ್ಷಕರ ಸೇವೆಯನ್ನು ಸ್ಮರಿಸಿ ಈ ಗೌರವ ಸಮರ್ಪಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಯುವ ಸೇವಾ ಸಂಗಮ ಸೇವಾ ಟ್ರಸ್ಟಿನ ಅಧ್ಯಕ್ಷರು, ಪದಾಧಿಕಾರಿಗಳು, ಟ್ರಸ್ಟಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.







