ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ, ಉಜಿರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಉಜಿರೆ ವಲಯ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವು ಉಜಿರೆಯ ಅನುಗ್ರಹ ಶಿಕ್ಷಣ ಸಂಸ್ಥೆಯ ಸಭಾಂಗಣದ ಆವರಣದಲ್ಲಿ ನಡೆಯಿತು.

ಪಂದ್ಯಾಟವನ್ನು ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ, ವಲಯ ಸಂಪನ್ಮೂಲ ಅಧಿಕಾರಿ ಶ್ರೀಮತಿ ಪ್ರತಿಮಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀ ನಿರಂಜನ್, ಉಜಿರೆ ವಲಯದ ನೋಡಲ್ ಅಧಿಕಾರಿ ಶ್ರೀ ದೇವಸ್ಯ ಸಿ.ಎ., ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ವಿಜಯ್ ಡಿಸೋಜ, ಆಡಳಿತ ಮಂಡಳಿ ಸದಸ್ಯರಾದ ಶ್ರೀ ಸ್ಟೀವನ್ ಮೊಂತೇರೊ, ಶ್ರೀಮತಿ ಬಬಿತಾ ಮೋರಸ್ ಹಾಗೂ ಶ್ರೀಮತಿ ಮರ್ಲಿನ್ ಮಿನೆಜಸ್ ಉಪಸ್ಥಿತರಿದ್ದರು.

ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಾಲಕಿಯರ ವಿಭಾಗದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡರೆ, ಸ.ಉ.ಹಿ.ಪ್ರ. ಶಾಲೆ, ತೋಟತ್ತಾಡಿ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಬಾಲಕರ ವಿಭಾಗದಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಮುಂಡಾಜೆ ಪ್ರಥಮ ಸ್ಥಾನ ಪಡೆದುಕೊಂಡರೆ, ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಎಲ್ಲರನ್ನು ಸ್ವಾಗತಿಸಿದರು. ಸಹಶಿಕ್ಷಕರಾದ ಗಣೇಶ್ ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.






