ಬೆಳ್ತಂಗಡಿ: ತಾಲೂಕಿನ ಕಾಶಿಪಟ್ಣ ಗ್ರಾಮದ ನೂಜಡ್ಡ ಹೊಸಮನೆಯ ನಿವಾಸಿ, 16 ವರ್ಷದ ಪ್ರೀತೇಶ್ ಎಸ್. ಪೂಜಾರಿ ಎಂಬ ಬಾಲಕ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ.

ನಾಪತ್ತೆಯಾದ ಬಾಲಕ ವೇಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಈತನ ತಂದೆ ಶುಭಕರ್.

ಸೆಪ್ಟೆಂಬರ್ 10, 2026ರಂದು ಸಂಜೆ ಸುಮಾರು 5:00 ಗಂಟೆಗೆ ಮನೆಯಿಂದ ಹೊರಟ ಈತ ಇದುವರೆಗೂ ವಾಪಸ್ ಬಾರದೆ ನಾಪತ್ತೆಯಾಗಿದ್ದಾನೆ. ಕುಟುಂಬಸ್ಥರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದರೂ ಬಾಲಕನ ಯಾವುದೇ ಸುಳಿವು ಸಿಕ್ಕಿಲ್ಲ.

ಸಾರ್ವಜನಿಕರಲ್ಲಿ ವಿನಂತಿ:
ಈ ಹುಡುಗನ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಕೆಳಕಂಡ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಸಂಪರ್ಕ ಸಂಖ್ಯೆ: 7349494237






