ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಹಿಂದಿ ದಿವಸ್ನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು, ಉಜಿರೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶೃತಿ ಮನ್ಕೀಕರ್ ಅವರು ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಿಂದಿ ಭಾಷೆಯ ಮಹತ್ವವನ್ನು ತಿಳಿಸಿ, ಭಾಷೆಯ ಬಗ್ಗೆ ಗೌರವ ಮತ್ತು ಅಭಿಮಾನ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಹಿಂದಿ ದಿವಸದ ಅಂಗವಾಗಿ ಪ್ರಬಂಧ ರಚನೆ, ಭಾಷಣ, ಹಿಂದಿ ಗೀತೆ ಹಾಗೂ ಭಿತ್ತಿಪತ್ರ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ.ಆರ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 10ನೇ ತರಗತಿಯ ಶ್ರೀರಕ್ಷಾ ಸ್ವಾಗತಿಸಿದರು. ರಿತಿಕಾ ಶೈಣೈ ನಿರೂಪಿಸಿದರು ಹಾಗೂ ಬೃಂದಾ ವಂದನಾರ್ಪಣೆ ನೆರವೇರಿಸಿದರು.

ಹಿಂದಿ ಶಿಕ್ಷಕಿ ಶ್ರೀಮತಿ ಮೆನಿತಾ ಶೆಟ್ಟಿ ಅವರು ಕಾರ್ಯಕ್ರಮದ ಯೋಜನೆ, ಸ್ಪರ್ಧೆಗಳ ಆಯೋಜನೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಗೆ ಮಾರ್ಗದರ್ಶನ ನೀಡಿ, ಕಾರ್ಯಕ್ರಮದ ಯಶಸ್ಸಿಗೆ ಪ್ರಮುಖವಾಗಿ ಸಹಕರಿಸಿದರು. ಹಿಂದಿ ಶಿಕ್ಷಕರಾದ ಮಂಜುನಾಥ ರವರ ಪೂರ್ಣ ಸಹಕಾರ ಸಂಯೋಜನೆಯೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು
ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.





