ಉಪ್ಪಿನಂಗಡಿ: ಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ದಾರುಣ ಮತ್ತು ಭೀಕರ ಘಟನೆಯೊಂದು ನಡೆದಿದೆ.

ಗಂಡನ ಜೊತೆ ಫೋನ್ನಲ್ಲಿ ಉಂಟಾದ ವೈವಾಹಿಕ ಕಲಹದ ಕೋಪದಲ್ಲಿ ಮಹಿಳೆಯೊಬ್ಬಳು ಇಬ್ಬರು ಎಳೆಯ ಮಕ್ಕಳನ್ನು ಬಾವಿಗೆ ಎಸೆದ ಘಟನೆ ಪೆರ್ಣೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಪೆರ್ಣೆ ನಿವಾಸಿ ಸಿನಾನ್ (32) ಹಾಗೂ ಆತನ ಪತ್ನಿ ನೂರುನ್ನಿಸಾ (28) ನಡುವೆ ಫೋನ್ನಲ್ಲಿ ಗಲಾಟೆ ನಡೆದಿತ್ತು. ಇದರಿಂದ ಆಕ್ರೋಶಗೊಂಡ ನೂರುನ್ನಿಸಾ, ತನ್ನ 3.5 ವರ್ಷದ ಮಗು ಹಾಗೂ ಗಂಡನ ತಂಗಿಯ 3 ವರ್ಷದ ಮಗುವನ್ನು ಮನೆ ಸಮೀಪದ ಬಾವಿಗೆ ಎಸೆದಿದ್ದಾಳೆ.

ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಮಕ್ಕಳನ್ನು ಮೇಲಕ್ಕೆತ್ತಿದರಾದರೂ, ಗಂಡನ ತಂಗಿಯ ಮಗು ಅಷ್ಟರಲ್ಲೇ ಮೃತಪಟ್ಟಿತ್ತು. ನೂರುನ್ನಿಸಾಳ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ: 121/2026) ದಾಖಲಾಗಿದ್ದು, ಆರೋಪಿ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.





