ಕಾರ್ಕಳ: ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್, ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಬಳಿಕ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಅವರನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಸ್ ಹಾಗೂ ಕಾರಿನಲ್ಲಿದ್ದ ಹಲವು ಪ್ರಯಾಣಿಕರೂ ಗಾಯಗೊಂಡಿದ್ದಾರೆ.
ಸ್ಥಳೀಯರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.





