ಪುತ್ತೂರು: ಪುತ್ತೂರಿನಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಪುತ್ತೂರಿನ ಕೆಯೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕೆಯೂರು ಗ್ರಾಮದ ನೂಜಿ ನಿವಾಸಿ, 22 ವರ್ಷದ ಭವಿತ್ ಪಕ್ಕಳ ಎಂದು ಗುರುತಿಸಲಾಗಿದೆ.
ಭವಿತ್ ಅವರು ಕಳೆದ ಕೆಲವು ಸಮಯಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ.


ಉದಯಿಸುವ ವಯಸ್ಸಿನಲ್ಲೇ ಯುವಕ ಭವಿತ್ ಅಗಲಿರುವುದು ಕುಟುಂಬಸ್ಥರು ಹಾಗೂ ಕೆಯೂರು ಗ್ರಾಮಸ್ಥರಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.





