ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಬಿ ಒಕ್ಕೂಟದ ಸಹಭಾಗಿತ್ವದಲ್ಲಿ ಸಾಮೂಹಿಕ ಶ್ರೀ ಧನ್ವಂತರಿ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಪೆರ್ನೆ ವಲಯದ ಮೇಲ್ವಿಚಾರಕರಾದ ಲತೇಶ್ ಸ್ವಾಗತಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕೃಷ್ಣ ಭಟ್ ಮೀರಾವನ ರವರು ನೆರವೇರಿಸಿದರು. ಮಾನ್ಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಶ್ರೀಮತಿ ಮೀನಾಕ್ಷಿ, ಶ್ರೀಮತಿ ವೀಣಾ ಸರಸ್ವತಿ, ಶ್ರೀ ರಚನ್ ಕುಮಾರ್, ಶ್ರೀ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ಶ್ರೀ ವಿಶ್ವನಾಥ ಗೌಡ, ಶ್ರೀ ಗೋಪಾಲಕೃಷ್ಣ ಭಟ್, ಶ್ರೀ ವಸಂತ ಭಟ್, ಶ್ರೀ ರಾಬರ್ಟ್ ಫೆರ್ನಾಂಡಿಸ್ ಹಾಗೂ ಶ್ರೀ ಚೆನ್ನಪ್ಪ ಕುಲಾಲ್ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಮ್ಲತ್ ವಂದಿಸಿದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಜಯಂತಿ ಮತ್ತು ಶಾರದಾ ಉಪಸ್ಥಿತರಿದ್ದರು.





