ಮೂಡುಬಿದಿರೆ: ಮೂಡುಬಿದಿರೆ ಬಿಜೆಪಿ ಯುವ ಮೋರ್ಚಾದ ಸಕ್ರಿಯ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ ಅವರು ಸೆಪ್ಟೆಂಬರ್ 22ರಂದು ನಿಧನರಾಗಿದ್ದಾರೆ.

39 ವರ್ಷ ವಯಸ್ಸಿನ ಪ್ರತೀಕ್ ಶೆಟ್ಟಿ ಅವರು ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿಯ ಭರವಸೆಯ ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು.

ಜಿಲ್ಲಾ ಬಿಜೆಪಿ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಇವರು, ಈ ಹಿಂದೆ ಮಂಡಲ ಯುವಮೋರ್ಚಾ ಕಾರ್ಯದರ್ಶಿಯಾಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದರು.

ವೃತ್ತಿಯಲ್ಲಿ ಉದ್ಯಮಿಯಾಗಿದ್ದ ಪ್ರತೀಕ್ ಶೆಟ್ಟಿ ಅವರು, ರಾಜಕೀಯದ ಜೊತೆಗೆ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.





