
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಅ.4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಭಜನಾ ಕಮ್ಮಟದ ಸಂಚಾಲಕರಾದ ಜಿ. ಸುಬ್ರಹ್ಮಣ್ಯ ಪ್ರಸಾದ್ ಅವರು ಹಾಗೂ ಭಜನಾ ಕಮ್ಮಟದ ಪ್ರಮುಖರು ಭಜನಾ ಕಮ್ಮಟದ ಆಮಂತ್ರಣ ಪತ್ರಿಕೆಯನ್ನು ಪೂಜ್ಯ ಸ್ವಾಮೀಜಿಯವರಿಗೆ ನೀಡಿ ಆಶೀರ್ವಾದ ಪಡೆದರು.






