ಮಂಗಳೂರು: ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತ ವಿದ್ಯಾರ್ಥಿಯನ್ನು ನಗರದ ಪ್ರಸಿದ್ಧ ಸೇಂಟ್ ಅಲೋಶಿಯಸ್ ಕಾಲೇಜಿನ ಶಮ್ಮಾಝ್ ಎಂದು ಗುರುತಿಸಲಾಗಿದೆ.

ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ನಡೆದ ದುರಂತದಲ್ಲಿ ಬಾಲ್ಕನಿಯ ತಡೆಗೋಡೆ ದಿಢೀರನೆ ಕುಸಿದು ಬಿದ್ದಿತ್ತನ್ನಲಾಗಿದೆ.

ಈ ಅಪಘಾತದಲ್ಲಿ ಶಮ್ಮಾಝ್ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡಿದ್ದ ಶಮ್ಮಾಝ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.





