ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 28ನೇ ವರ್ಷದ ಭಜನಾ ಕಮ್ಮಟವು ಸೆ.28ರಿಂದ ಅ.4ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

ಸೆ.28ರಂದು ಬೆಳಿಗ್ಗೆ 11ಕ್ಕೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಭಜನಾ ಕಮ್ಮಟದ ಉದ್ಘಾಟನಾ ಸಮಾರಂಭ ನಡೆಯಿತು.

ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನ ಶ್ರೀ ಸುಬ್ರಹ್ಮಣ್ಯ ಮಠದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದಂಗಳವರು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸಿದ್ದರು.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷರಾದ ಡಾ. ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.




