ಕಾಶಿಪಟ್ಣ: 15 ನೇ ವರ್ಷದ ಕಾಶಿಪಟ್ಣ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೇಳ ಮಾಗಣೆ ಗುರಿಕಾರರಾದ ಶ್ರೀ ಅಶೋಕ್ ಕೋಟ್ಯಾನ್ ಪಡ್ಯೋಡಿಯವರು ಬಿಡುಗಡೆ ಮಾಡಿದರು.
ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಅಕ್ಟೋಬರ್.01 ರಂದು ನಡೆಯಿತು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.







