ಶಿಶಿಲ: ಮಂತ್ರಾಲಯಕ್ಕೆ ಕ್ಷೇತ್ರ ದರ್ಶನಕ್ಕಾಗಿ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೆಳ್ತಂಗಡಿ ತಾಲೂಕಿನ ಶಿಶಿಲ ನಿವಾಸಿ ಯುವಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಮೃತಪಟ್ಟ ದುರ್ದೈವಿ.
ಅಪಘಾತ ಸಂಭವಿಸಿದ್ದು ಹೇಗೆ?
ಸೆಪ್ಟೆಂಬರ್ 29ರಂದು ನಸುಕಿನ ಜಾವ ರಾಷ್ಟ್ರೀಯ ಹೆದ್ದಾರಿ 73ರ ಸಬ್ಬೇನಹಳ್ಳಿ ಸಮೀಪ ಈ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ದೀಪೇಶ್ ಸೇರಿದಂತೆ ಒಟ್ಟು ಆರು ಮಂದಿ ಇನೋವಾ ಕಾರಿನಲ್ಲಿ ಮಂತ್ರಾಲಯದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ವಿರುದ್ಧ ದಿಕ್ಕಿನಿಂದ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಫೋರ್ಡ್ ಎಂಡೆವರ್ ಕಾರು ತಪ್ಪು ಬದಿಗೆ ನುಗ್ಗಿ ಇನೋವಾ ಕಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ.

ಶಿಶಿಲದಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಶಿಶಿಲದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ದೀಪೇಶ್ ಅವರನ್ನು ಬಣಕಲ್, ಉಜಿರೆ ಮೂಲಕ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಅ.1ರಂದು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್ಎಸ್ ಕಲಂ 281 ಹಾಗೂ 125(ಎ) ಅಡಿ ಎಫ್ಐಆರ್ ದಾಖಲಾಗಿದೆ. ಆದರೆ ಅಪಘಾತಕ್ಕೆ ಕಾರಣನಾದ ಕಾರಿನ ಚಾಲಕ ಮದ್ಯಪಾನ ಮಾಡಿದ್ದ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರೂ ಎಫ್ಐಆರ್ನಲ್ಲಿ ದಾಖಲಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ.





