ಬೆಳ್ತಂಗಡಿ: ಮಂಗಳೂರಿನ ಪಣಂಬೂರು ಸಮುದ್ರಕ್ಕೆ ಈಜಲು ತೆರಳಿದ್ದ ಬೆಳ್ತಂಗಡಿಯ ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಅಲೆಗಳ ಸೆಳೆತಕ್ಕೆ ಸಿಲುಕಿ ನೀರುಪಾಲಾದ ದಾರುಣ ಘಟನೆ ಭಾನುವಾರ ಸಂಜೆ ನಡೆದಿದೆ.

ಮೃತ ಬಾಲಕನನ್ನು ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ ಶೇಖರ್ ಎಂಬುವವರ 15 ವರ್ಷದ ಪುತ್ರ ಶ್ರೇಯಸ್ ಎಂದು ಗುರುತಿಸಲಾಗಿದೆ. ಶ್ರೇಯಸ್ ಬೆಳ್ತಂಗಡಿಯ ಸರಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.







