ಕಾಶಿಪಟ್ಣ: ವೇಣೂರು ವಲಯ ಮಟ್ಟದ ಪ್ರೌಢಶಾಲೆಗಳ ವಾಲಿಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು,

ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ತೋರಿ ಶಾಲೆಗೆ ಕೀರ್ತಿ ತಂದ ಬಾಲಕ-ಬಾಲಕಿಯರ ತಂಡಗಳಿಗೆ, ಅವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.





