ಬೆಳ್ತಂಗಡಿ : ಡಾ. ಪ್ರದೀಪ್ ನಾವೂರು ಅವರ ಕ್ಲಿನಿಕ್ಗೆ ಇತ್ತೀಚೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದುಷ್ಕೃತ್ಯ ಎಸಗಿರುವ ಘಟನೆಯನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಕೇಳಿಬಂದಿದೆ.

ಸಂಗಮ ಯುವಕ ಮಂಡಲ (ರ) ಇಜ್ಜಲ, ಉಜಿರೆ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸಾರ್ವಜನಿಕರಿಗೆ ನಿರಂತರ ವೈದ್ಯಕೀಯ ಸೇವೆ ನೀಡುತ್ತಿದ್ದ ಡಾ. ಪ್ರದೀಪ್ ನಾವೂರು ಅವರ ಕ್ಲಿನಿಕ್ಗೆ ಬೆಂಕಿ ಹಚ್ಚಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಮಾಜಘಾತಕ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಶೀಘ್ರವೇ ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಂಗಮ ಯುವಕ ಮಂಡಲದ ನಿಯೋಗ ಬೆಳ್ತಂಗಡಿ ಠಾಣಾಧಿಕಾರಿಗಳನ್ನು ಒತ್ತಾಯಿಸಿದೆ.





