ಬಂಟ್ವಾಳ: ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ, ಬಡೆಕೊಟ್ಟು ಬಂಟ್ವಾಳ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ರವರು ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ರಾಜ್ಯಮಟ್ಟದ ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುತ್ತಿರುವ ಅವರು, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ.


ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಅವರು, ತಮ್ಮೊಂದಿಗೆ ಕಾರ್ಯನಿರ್ವಹಿಸುವ ಎಲ್ಲ ಶಿಕ್ಷಕರೊಂದಿಗೆ ಸ್ನೇಹಪೂರ್ವಕವಾಗಿ ನಡೆದುಕೊಳ್ಳುವ ಆದರ್ಶ ಹಾಗೂ ಸಹೃದಯಿ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಹಕಾರ, ಸ್ನೇಹ ಮತ್ತು ಪರಸ್ಪರ ಗೌರವಕ್ಕೆ ಹೆಚ್ಚಿನ ಮಹತ್ವ ನೀಡುವ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ.





