ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ಕಳೆದ ಅಕ್ಟೋಬರ್ 6 ರಂದು ರಾತ್ರಿ ನಡೆದಿದ್ದ ವೈದ್ಯಕೀಯ ಕ್ಲಿನಿಕ್ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ನಡ ಗ್ರಾಮ ನಿವಾಸಿ ಡಾ. ಪ್ರದೀಪ ಎ. ಎಂಬವರು ಬೆಳ್ತಂಗಡಿ ನಾವೂರು ಎಂಬಲ್ಲಿ ನಡೆಸುತ್ತಿದ್ದ ಕ್ಲಿನಿಕ್ ಅ. 6 ರಂದು ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಾಕಿದ ಪರಿಣಾಮ ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು ಮೌಲ್ಯ 2 ರಿಂದ 3 ಲಕ್ಷ ಸೊತ್ತುಗಳು ಸುಟ್ಟುಹೋದ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅ ಕ್ರ 112/2026 00: ໖໖: 2023 03 ದಾಖಲಾಗಿರುತ್ತದೆ.

326(f), 326(G), 324(5)
ಸದ್ರಿ ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಗಳಾದ ಬೆಳ್ತಂಗಡಿ ನಾವೂರು ನಿವಾಸಿಗಳಾದ ರವಿ ಕುಮಾರ್ (31ವ), ಸುರೇಶ್ ಪಿ.ಎನ್ (44ವ) ಮತ್ತು ದಿನೇಶ್ ಪ್ರಭು (51ವ) ಎಂಬವರುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.





