ವೇಣೂರು: ಕೆಲಸ ಮಾಡುತ್ತಿದ್ದ ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಆರೋಪಿ ಎಂದು ಗುರುತಿಸಲಾಗಿದೆ.

ಅ.24ರಂದು ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಕಲಂ 75(1)(ii), 75(1)(iv), 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ತಡೆ) : ಕಾಯ್ದೆಯ ಕಲಂ 3(1)(r), 3(1)(w)(ii), 3(2)(va) ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.





