ಉಜಿರೆ: ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು ಜಗದ್ಗುರು ಶಂಕರಾಚಾರ್ಯ ಶ್ರೀ ತೋಟಕಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ, ಕಾಸರಗೋಡು ಇಲ್ಲಿನ ಸ್ವಾಮೀಜಿಗಳು ಅಕ್ಟೋಬರ್ 24 ರಂದು

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪ್ರಾಧ್ಯಾಪಕ ಹಾಗೂ ತರಗತಿ ಪ್ರತಿನಿಧಿಗಳಿಗೆ ಆಶೀರ್ವದಿಸಿದರು. ಆಶೀರ್ವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಲೇಜಿನ ಮೌಲ್ಯಯುತ ಶಿಕ್ಷಣ ನೀತಿಯನ್ನು ಪ್ರಶಂಶಿಸಿದರು.
ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಕಾರ್ಯ ವೈಖರಿಗಳನ್ನು ನೆನಪಿಸುತ್ತಾ ಇಂತಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಧನ್ಯರು ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪರಮಪೂಜ್ಯ ಸ್ವಾಮೀಜಿಗಳನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ ಸ್ವಾಗತಿಸಿ, ಉಪ ಪ್ರಾಂಶುಪಾಲ ಡಾ. ರಾಜೇಶ್ ಬಿ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ನಿಹಾರಿಕಾ ಜಿ ಎನ್ ಕಾರ್ಯಕ್ರಮ ನಿರ್ವಹಿಸಿದರು.





