ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ನಡೆಸುವ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ತನ್ಮಯ್. ಕೆ. ಕೆ ವಿಶಿಷ್ಟ ಶ್ರೇಣಿಯನ್ನು ಪಡೆದು ತೇರ್ಗಡೆಯಾಗಿದ್ದಾರೆ. ಸುಮಾರು 15 ವರ್ಷಗಳ ಭರತನಾಟ್ಯ ಸಾಧನೆಯಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ.

ತನ್ಮಯ್ ಅವರು ತಮ್ಮ ಭರತನಾಟ್ಯ ಕಲಿಕೆಯನ್ನು ವಿಶ್ವಕಲಾನಿಕೇತನ ಇನ್ಶ್ಟಿಟ್ಯೂಟ್ ಆಫ್ ಆರ್ಟ್ಸ್ ಆಂಡ್ ಕಲ್ಚರ್ (ರಿ.) ಪುತ್ತೂರು ಎಂಬ ನೃತ್ಯಸಂಸ್ಥೆಯಲ್ಲಿ ಕರ್ನಾಟಕ ಕಲಾಶ್ರೀ ವಿದುಷಿ. ನಯನ. ವಿ. ರೈ. ಹಾಗೂ ವಿದುಷಿ. ಸ್ವಸ್ತಿಕ ಆರ್. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಅವರು, ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಅಧ್ಯಯನ ಮತ್ತು ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.


ಪ್ರಸ್ತುತ ನಿಟ್ಟೆ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್, ಪನೀರ್, ದೇರಳಕಟ್ಟೆ, ಮಂಗಳೂರು ಇಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದಾರೆ (ಎಂ. ಎಸ್ಸಿ. ಬಯೋಟೆಕ್).
ಇವರು ಶ್ರೀ ಕುಮಾರಸ್ವಾಮಿ. ಕೆ. ಎಸ್. ಹಾಗೂ ಶ್ರೀಮತಿ ಗೀತಾ. ಕೆ ದಂಪತಿಗಳ ಪುತ್ರ.





