ಉಜಿರೆ: ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಶಿಕ್ಷಕಿ ಶ್ರೀಮತಿ ಮಾಲಿನಿ ಅವರು ಕನ್ನಡ ರಾಜ್ಯೋತ್ಸವದ ಮಹತ್ವ, ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಕನ್ನಡ ಭಾಷೆಯ ಶ್ರೀಮಂತಿಕೆ, ಸಾಹಿತ್ಯದ ವೈಭವ ಮತ್ತು ಕನ್ನಡಿಗರ ಅಭಿಮಾನದ ಕುರಿತು ತಿಳಿಸುತ್ತಾ, ಕನ್ನಡ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ನಿತ್ಯ ಜೀವನದಲ್ಲಿ ಕನ್ನಡವನ್ನು ಬಳಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ನಾಡಿನ ಹಿರಿಮೆ ಹಾಗೂ ಭಾಷಾಭಿಮಾನವನ್ನು ಸಾರುವ ಕನ್ನಡ ಗೀತೆಯ ಗುಂಪುಗಾಯನ ನಡೆಯಿತು. ವಿದ್ಯಾರ್ಥಿಗಳ ಗಾಯನವು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಶಾಲೆಯ ಶೈಕ್ಷಣಿಕ ಸಂಯೋಜಕರಾದ ಶಿಕ್ಷಕಿ ಶ್ರೀಮತಿ ಸುಮಾ ಶ್ರೀನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಶ್ರೀಮತಿ ಉಷಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.





