ಉಜಿರೆ: ಉದಯವಾಣಿ ವತಿಯಿಂದ ಆಯೋಜಿಸಲಾದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ನವೆಂಬರ್ 1ರಂದು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆದ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಚಿತ್ರಕಲಾ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಸ್ಪರ್ಧೆಯ ಸಬ್ ಜೂನಿಯರ್ ವಿಭಾಗದಲ್ಲಿ ಸಾನಿಧ್ಯ ಮಯ್ಯ ತೃತೀಯ ಸ್ಥಾನವನ್ನು ಗಳಿಸಿದರೆ, ತೃಷಿಕಾ ಎ.ಎಸ್. ಹಾಗೂ ಆದ್ಯಾ ಪಿ. ಸಮಾಧಾನಕರ ಬಹುಮಾನಕ್ಕೆ ಭಾಜನರಾಗಿದ್ದಾರೆ. ಜೂನಿಯರ್ ವಿಭಾಗದಲ್ಲಿ ಸಾನಿಧ್ಯ ಹೆಬ್ಬಾರ್ ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇಂತಹ ಸೃಜನಶೀಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಇನ್ನಷ್ಟು ಸಾಧನೆಗಳನ್ನು ಮಾಡುವಂತೆ ಶುಭ ಹಾರೈಸಿದ್ದಾರೆ.





