ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ನವೆಂಬರ್ 19ರಂದು ಪ್ರಗತಿ ಪರಿಶೀಲನಾ ತಂಡ ಭೇಟಿ ನೀಡಿದ್ದು ಶಾಲೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಶ್ರೀ ಧ. ಮಂ. ಎ ಸೊಸೈಟಿಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶ್ರೀ ಧನ್ಯಕುಮಾರ್ ಹಾಗೂ ಅವರ ತಂಡದ ಸದಸ್ಯರು ಶಾಲೆಗೆ ಭೇಟಿ ನೀಡಿದರು.

ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿದ ತಂಡದ ಸದಸ್ಯರು, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಅದೇ ದಿನ ರಾಜ್ಯದ ಅತ್ಯುತ್ತಮ ಗ್ರಂಥಪಾಲಕಿ ಪ್ರಶಸ್ತಿಯನ್ನು ಪಡೆದುಕೊಂಡ ಎಸ್ ಡಿ ಯಂ ಕಾಲೇಜು ಉಜಿರೆಯ ಗ್ರಂಥಪಾಲಕಿ ಶ್ರೀಮತಿ ರಜತ ಪಿ ಶೆಟ್ಟಿ ಇವರನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು.





