ಕೊಕ್ಕಡ: ಪಟ್ರಮೆ ಗ್ರಾಮದ ಪೆರ್ಮುಡ ಎಂಬಲ್ಲಿ ಮಹಿಳೆಯೊಬ್ಬರು ತಮ್ಮ ಮನೆಯ ಸಮೀಪ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನವೆಂಬರ್ 18ರಂದು ನಡೆದಿದೆ.

ಮೃತ ಮಹಿಳೆಯನ್ನು ಮೂಲತಃ ಕೌಕ್ರಾಡಿ ಗ್ರಾಮದವರಾಗಿದ್ದು, ಪ್ರಸ್ತುತ ಪೆರ್ಮುಡದಲ್ಲಿ ವಾಸವಾಗಿದ್ದ ಗೀತಾ (42) ಎಂದು ಗುರುತಿಸಲಾಗಿದೆ. ಮೃತರು ಐವರು ಪುತ್ರರನ್ನು ಅಗಲಿದ್ದಾರೆ.


ಮಹಿಳೆಯ ಈ ಕಠಿಣ ನಿರ್ಧಾರಕ್ಕೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು ಭೇಟಿ ನೀಡಿ, ಸ್ಥಳ ಮಹಜರು ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.





