ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿಭಾಗ ಮತ್ತು ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜು, ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ನಡೆದ

ಮೈಸೂರು ವಲಯಮಟ್ಟದ ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾಗರಿಕಾ ಪ್ರಥಮ ಬಹುಮಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಉಪಪ್ರಾಂಶುಪಾಲ ಡಾ. ರಾಜೇಶ್ ಬಿ., ಉಪನ್ಯಾಸಕ ವೃಂದ ಹಾಗೂ ಸಾಂಸ್ಕೃತಿಕ ಸಮಿತಿಯ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.





