ಪುತ್ತೂರು:(ನ.18) ಮೇಸ್ತ್ರಿ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 🟣ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನ ಸಹಾಯ
ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾವೊ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು ಹೆನ್ರಿ ತಾವೋ, ಸ್ಪ್ಯಾನಿ ಮೇಸ್ತ್ರಿ ಹಾಗೂ ಇನ್ನೊಬ್ಬರು ಸೇರಿ ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ಮಲಗಿಸಿಕೊಡು ಬಂದು ಶಿವಪ್ಪ ಅವರ ಮನೆಯ ಬಳಿ ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದರು.
ಶಿವಪ್ಪ ಅವರು ಮಾತನಾಡದೇ ಇದ್ದಾಗ ಅವರ ಪತ್ನಿ ಮತ್ತು ಮಗಳು ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಶಿವಪ್ಪ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದರು.
ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.