Thu. Nov 21st, 2024

Udupi: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ – ಕಾರು ರಿವರ್ಸ್ ತೆಗೆಯುವ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ!!! – ಇಬ್ಬರಿಗೆ ಗಂಭೀರ ಗಾಯ

ಉಡುಪಿ: (ನ.21) : ಕಾರು ರಿವರ್ಸ್ ತೆಗೆಯುವ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಇದನ್ನೂ ಓದಿ: ⭕ಮಂಗಳೂರು: ಬೆಳ್ಳಂಬೆಳಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇನ್ನೋವಾ ಕಾರನ್ನು ರಿವರ್ಸ್ ತೆಗೆಯುವ ವೇಳೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನೋವಾ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ, ಇವರು ಕೊಲ್ಲೂರು ದೇವರ ದರ್ಶನ ಮುಗಿಸಿ ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಹೆದ್ದಾರಿಯಲ್ಲಿ ವಾಹನವನ್ನು ನಿಲ್ಲಿಸಿ ರಿವರ್ಸ್ ತೆಗೆಯಲು ಹೋಗಿದ್ದಾರೆ.

ಈ ಹಿಂಬದಿಯಿಂದ ವೇಗವಾಗಿ ಬಂದ ಮೀನಿನ ಲಾರಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ, ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಕೋಟೇಶ್ವರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕಾರಿನಲ್ಲಿದ್ದವರು ಕೇರಳ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *