ಬೆಂಗಳೂರು:(ನ.25) ಹಿಂದೂ ಧರ್ಮದ ದೇವರುಗಳ ಬಗ್ಗೆ ಸಾಮಾಜಿ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಇದನ್ನೂ ಓದಿ: 🟠ಉಜಿರೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ
ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.
ಈ ವಿಚಾರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಅಂಜುಮ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಾಂಬೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ ಮತ್ತು ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ.
ಈ ಕಾಮೆಂಟ್‌ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ. ಎಂದರು.
ಅವರ ಧರ್ಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. ನಾವು ಅವರ ತರಹ ಬೆಂಕಿ ಹಚ್ಚುವ ಕೆಲಸ ಮಾಡಲ್ಲ. ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದೇವೆ. ನಾವು ರಾಮನ ತರಹ ಇದ್ದೀವಿ, ಆದರೆ ಪರಶುರಾಮ ಆಗಬೇಕಾಗುತ್ತದೆ ಎಂದರು.