Wed. Apr 16th, 2025

Mumbai: ನಾನ್‌ ವೆಜ್‌ ಸೇವನೆ ಬಿಡುವಂತೆ ಪ್ರಿಯಕರನಿಂದ ಒತ್ತಡ – ಏರ್‌ ಇಂಡಿಯಾ ಪೈಲಟ್ ಆತ್ಮಹತ್ಯೆ!! – ಪ್ರಿಯಕರ ಅರೆಸ್ಟ್‌

ಮುಂಬೈ :(ನ.28) ಆಹಾರ ಪದ್ದತಿಯನ್ನು ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್‌ ಇಂಡಿಯಾ ಪೈಲಟ್‌ ನೇಣಿಗೆ ಶರಣಾದ ಘಟನೆ ಮುಂಬೈನ ಅಂಧೇರಿಯ ಮರೋಲ್‌ ಪ್ರದೇಶದಲ್ಲಿ ನಡೆದಿದೆ.

ಇದನ್ನೂ ಓದಿ: ⭕ಹೆಬ್ರಿ: ಮರದಿಂದ ಬಿದ್ದು ಪ್ರಗತಿಪರ ಕೃಷಿಕ ಮೃತ್ಯು

ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣಾದ ಪೈಲಟ್.‌ ಈಕೆ ಫ್ಪ್ಯಾಟ್‌ ವೊಂದರಲ್ಲಿ ಡೇಟಾ ಕೇಬಲ್ ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯಾವುದೇ ಡೆತ್ ನೋಟ್‌ ಪತ್ತೆಯಾಗಿಲ್ಲ.


ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಆಕೆಯ ಪ್ರಿಯಕರ ಆದಿತ್ಯ ಪಂಡಿತ್‌ ನನ್ನು (27) ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಆದಿತ್ಯ ಪದೇ ಪದೇ ಸೃಷ್ಟಿಯನ್ನು ಸಾರ್ವಜನಿಕವಾಗಿ ಅವಮಾನಿಸುವುದಲ್ಲದೇ ಆಕೆಯ ಆಹಾರ ಪದ್ದತಿ ಬದಲಾಯಿಸುವಂತೆ ಹೇಳುತ್ತಿದ್ದ. ಅಲ್ಲದೇ ಮಾಂಸಾಹಾರ ಸೇವನೆ ಬಿಡುವಂತೆ ಆಕೆಯ ಮೇಲೆ ಒತ್ತಡ ಹೇರಿದ್ದ ಎಂದು ಸೃಷ್ಟಿ ಚಿಕ್ಕಪ್ಪ ಆರೋಪಿಸಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿತ್ತು.

ಸೋಮವಾರ ಮುಂಜಾನೆ ದೆಹಲಿಗೆ ತೆರಳುತ್ತಿದ್ದ ಪ್ರಿಯಕರ ಆದಿತ್ಯನಿಗೆ ಸೃಷ್ಟಿ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಳು. ಇದನ್ನು ತಿಳಿದ ಆದಿತ್ಯ ತಕ್ಷಣವೇ ಆಕೆ ಇದ್ದ ಫ್ಲ್ಯಾಟ್‌ಗೆ ಬಂದು ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಈ ವೇಳೆ ನಕಲಿ ಕೀ ತಯಾರಕರನ್ನು ಕರೆಸಿ ಬಾಗಿಲು ತೆಗೆದು ನೋಡಿದಾಗ ಸೃಷ್ಟಿ ಡೇಟಾ ಕೇಬಲ್ ಸಹಾಯದಿಂದ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಆಕೆಯನ್ನು ಅಂಧೇರಿಯ ಸೆವೆನ್ ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು. ಸೃಷ್ಟಿ ಉತ್ತರ ಪ್ರದೇಶ ಮೂಲದವಳಾಗಿದ್ದು, ಕಳೆದ ವರ್ಷ ಜೂನ್‌ನಿಂದ ಮುಂಬೈನಲ್ಲಿ ನೆಲೆಸಿದ್ದಳು ಎಂದು ಅಧಿಕಾರಿ ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ವಾಣಿಜ್ಯ ಪೈಲಟ್ ಕೋರ್ಸ್ ಓದುತ್ತಿರುವಾಗ ಆದಿತ್ಯನನ್ನು ಭೇಟಿಯಾಗಿದ್ದಳು. ನಂತರ ಇವರಿಬ್ಬರ ಸ್ನೇಹ ಪ್ರೀತಿಗೆ ಬದಲಾಗಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *