Fri. Dec 27th, 2024

Mangaluru: ಫೆಂಗಲ್ ಚಂಡಮಾರುತ – ಕರಾವಳಿಯಲ್ಲಿ ಮೋಡಕವಿದ ವಾತಾವರಣ

ಮಂಗಳೂರು:(ಡಿ.2) ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಣವಿದ್ದು ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: 💠ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ ಸಂಪನ್ನ

ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

‘ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ,” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *