Fri. Dec 27th, 2024

Mangaluru: ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆ – ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಸಸ್ಪೆಂಡ್‌!!

ಮಂಗಳೂರು :(ಡಿ.5) ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ:(ಡಿ.7) ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ

ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.

ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *