Fri. Dec 27th, 2024

ಮೇಷ ರಾಶಿ: ಹೊಸ ಅನ್ವೇಷಣೆಯ ಕಡೆ ಗಮನವಿರುವುದು. ಇಂದಿನ ವ್ಯವಹಾರವನ್ನು ತಾಳ್ಮೆಯಿಂದ ನಿರ್ವಹಿಸಬೇಕು. ಆಸ್ತಿಯ ಬಗ್ಗೆ ಕಾನೂನಾತ್ಮಕವಾಗಿ ಇರಬೇಕಾಗುವುದು. ಇಂದು ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ಬಹಳ ದಿನಗಳ ಅನಂತರ ನೀವು ಹುಡುಕಿದ್ದು ಸಿಗಬಹುದು. ಆದರೆ ಪ್ರಯೋಜನವಾಗದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ.

ವೃಷಭ ರಾಶಿ: ಎಲ್ಲದಕ್ಕೂ ನಿಮ್ಮನ್ನು ನೀವು ಏನೋ ಅಂದುಕೊಳ್ಳುವುದು ಬೇಡ. ಅಸ್ಪಷ್ಟ ಮಾಹಿತಿಗಳು ನಿಮ್ಮ ದಿಕ್ಕು ತಪ್ಪಿಸಬಹುದು. ಸ್ವಂತ ಉದ್ಯಮ ಮಾಡುವವರಿಗೆ ಒಳ್ಳೆಯ ಸಮಯ. ಕಟ್ಟುಪಾಡುಗಳನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ನಿಮ್ಮ ದಿನದ ಆರಂಭವು ಸಾಮಾನ್ಯವಾಗಿರುತ್ತದೆ. ಹಣವನ್ನು ಬಹಳ ನೈಪುಣ್ಯದಿಂದ ಖರ್ಚು ಮಾಡುವಿರಿ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.

ಮಿಥುನ ರಾಶಿ: ಇಂದು ಯಾವುದೇ ಕಾರಣಕ್ಕೂ ನಿಮ್ಮ ಕರ್ತವ್ಯದಲ್ಲಿ ಯಾವುದೇ ಲೋಪವು ಬಾರದಂತೆ ನೋಡಿಕೊಳ್ಳಿ. ಇನ್ನೊಬ್ಬರ ಮಾತನ್ನು ಪೂರ್ಣವಾಗಿ ನಂಬಿ ನಿಮ್ಮವರನ್ನು ಕಳೆದುಕೊಳ್ಳಲಿದ್ದೀರಿ. ಇಂದು ನಿಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಇರಿಸಿ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ಅಪಕ್ವ ಮನುಷ್ಯರು ನಿಮ್ಮನ್ನು ಭೇಟಿಯಾಗಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.

ಕರ್ಕಾಟಕ ರಾಶಿ: ಮೌನದಿಂದ ಇಂದು ಇರುವುದು ಉತ್ತಮ. ನಿಮ್ಮ ಮಾತು ಕಿರಿಕಿರಿಯಾಗಬಹುದು. ಹಿರಿಯರ ಮಾತನ್ನು ಧಿಕ್ಕರಿಸಿ ಮುನ್ನಡೆಯುವುದು ಬೇಡ. ನೀವು ಬದಲಿಸಿಕೊಂಡ ಜೀವನಶೈಲಿಯ ಬಗ್ಗೆ ಕೆಲಸದವರು ಆಡಿಕೊಳ್ಳಬಹುದು. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಪ್ರಾಪ್ತಿಯಾಗಲಿದೆ. ಇಂದು ಮಹಿಳೆಯರಿಗೆ ಶುಭ ದಿನ. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ.

ಸಿಂಹ ರಾಶಿ: ಯೋಜನೆಯಲ್ಲಿ ನಿಮಗೆ ಸೋಲಾಗುವ ಸಾಧ್ಯತೆ ಇದೆ. ಇಂದು ನಿಮ್ಮ ಹಿತ್ತಾಳೆ ಕಿವಿಯಿಂದ ಸಂಬಂಧವು ಹಾಳಾಗುವುದು. ಕೆಲಸಗಳಲ್ಲಿ ಹಿನ್ನಡೆಯಾಗಿ ಮೇಲಧಿಕಾರಿಗಳಿಂದ‌ ಸೂಚನೆ ಬರಬಹುದು. ವೃತ್ತಿಪರ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಸರಿಯಾದ ಆಹಾರ ಮತ್ತು ಶಿಸ್ತುಬದ್ಧ ಜೀವನವು ನಿಮ್ಮ ಉತ್ತಮ ಆರೋಗ್ಯಕ್ಕೆ ಪ್ರಮುಖವಾಗಿದೆ. ವಸ್ತುಗಳ ಖರೀದಿಯಲ್ಲಿ ಧಾವಂತ ಬೇಡ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಸಂಜೆಯ ವೇಳೆಗೆ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ.

ಕನ್ಯಾ ರಾಶಿ: ಯಾವುದೂ ನೀವು ಅಂದುಕೊಂಡಷ್ಟು ಸುಲಭದ ತುತ್ತಾಗದು. ಹಿತಶತ್ರುಗಳನ್ನು ಆಪ್ತತೆಯಿಂದ ನಿಮ್ಮವರನ್ನಾಗಿ ಮಾಡಿಕೊಳ್ಳುವಿರಿ. ಎಲ್ಲವನ್ನು ನೀವು ಕಲ್ಪಿಸಿಕೊಂಡು ಅನಂತರ ಸಂಕಟಪಡುವಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಕಾರ್ಯದ ಕಾರಣದಿಂದ ದೂರದೂರಿಗೆ ಪ್ರಯಾಣ ಸಾಧ್ಯತೆ ಇದೆ. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇಟ್ಟುಕೊಳ್ಳಿ.

ತುಲಾ ರಾಶಿ: ಅಸ್ತಿತ್ವವನ್ನು ಉಳಿಸಿಕೊಳ್ಳುವ ಹೋರಾಟ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಭೂಮಿ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯವು ಆಗುವುದು. ವೃತ್ತಿಪರರು ಇಂದು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಬಹುದು. ಹತ್ತಿರದವರು ದೂರಾಗಬಹುದು. ಹಳೆಯ ಬಂಧುಗಳನ್ನು ಭೇಟಿ ಮಾಡುವುದು ಇಂದಿನ ಉತ್ಸಾಹಕ್ಕೆ ಕಾರಣವಾಗುವುದು. ನೀವು ಹೊಸ ಗುರಿಗಳನ್ನು ಹೊಂದಿದ್ದು ನಿಮ್ಮ ಪ್ರಯತ್ನಗಳನ್ನು ಪ್ರಾರಂಭಿಸುವಿರಿ. ನೀವು ಕೆಲವು ವ್ಯವಹಾರ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸುವಿರಿ. ಸಂಪತ್ತಿನ ಹೆಚ್ಚಳವಾಗಬಹುದು.

ವೃಶ್ಚಿಕ ರಾಶಿ: ಮಕ್ಕಳ‌ಕಾರಣದಿಂದ ಜನಪ್ರಿಯರಾಗಬಹುದು. ಇಂದು ನೀವು ಬಹಳ ಸೌಮ್ಯತೆಯಿಂದ ವ್ಯವಹರಿಸಬೇಕು. ಉದ್ಯೋಗದಿಂದ ಹೊರಬಂದು ಮನೆಯ ಬಗ್ಗೆ ಗಮನ ಹೆಚ್ಚಾಗುವುದು. ಇಂದು ಕೆಲಸದ ಸ್ಥಳದ ಸಮಸ್ಯೆಗಳಿಗೆ ನಿಮ್ಮ ನಿಷ್ಪಕ್ಷಪಾತ ವಿಧಾನವು ನಿಮ್ಮನ್ನು ಜನಪ್ರಿಯಗೊಳಿಸುವುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ.

ಧನು ರಾಶಿ; ಅಧಿಕಾರಿ ವರ್ಗದ ಜೊತೆ ಸಮರ್ಪಕವಾಗಿ ಸಂವಹನ ನಡೆಸುವಿರಿ. ಸ್ನೇಹಿತರ ಜೊತೆ ನೀವು ಈ ದಿನವನ್ನು ಆನಂದದಿಂದ ಕಳೆಯುವಿರಿ. ಆದಾಯದಲ್ಲಿ ಹಿನ್ನಡೆ ಆಗುವುದು. ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯಲ್ಲಿ ಉತ್ಸಾಹವು ಹೆಚ್ಚಿರುವುದು. ಮಾತು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ.

ಮಕರ ರಾಶಿ: ಕೆಲವರ ಮಾತು ನಿಮ್ಮನ್ನು ಕೆರಳಿಸಬಹುದು. ಉದ್ಯಮವನ್ನು ಸಡಿಲಮಾಡುವುದು ಬೇಡ. ನಿರುದ್ಯೋಗದ ಕಾರಣಕ್ಕೆ ಎಲ್ಲರೂ ನಿಮ್ಮನ್ನು ತಮಾಷೆ ಮಾಡಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಬಂದ ಹಣದಿಂದ ಸಾಲಬಾಧೆ ನಿವಾರಣೆಯಾಗುವುದು. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ನೀವು ಎಲ್ಲರೊಂದಿಗೆ ಸಭ್ಯವಾಗಿ ಮಾತನಾಡಬೇಕು.

ಕುಂಭ ರಾಶಿ: ಎಲ್ಲ ಕಡೆಗಳಲ್ಲಿ ನಿಮ್ಮಂತೆ ನಡೆಯದು. ಇನ್ನೊಬ್ಬರ ಭಾವನೆಗೆ ಬೆಲೆ ಕೊಟ್ಟಾಗ ನಿಮಗೂ ಅದು ಸಿಗುವುದು. ನಿಮ್ಮ ವೃತ್ತಿಯ ಆದಾಯಕ್ಕಿಂತ ಬೇರೆ ಕಡೆಯಿಂದ ಆದಾಯ ಸಿಗಲಿದೆ. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ನಂಬಿಕೆಯ ಆಧಾರದಲ್ಲಿ ಹಣವನ್ನು ಕೊಡುವಿರಿ. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ.

ಮೀನ ರಾಶಿ: ನಿಮ್ಮ ಅನುಪಮ ವ್ಯಕ್ತಿತ್ವವು ತಿಳಿದುಬರಬಹುದು. ನಿಮ್ಮ ವಿರುದ್ಧದ ಸಂಚು ಇಂದು ಬಯಲಾಗಬಹುದು. ಪರರ ಭಾಗ್ಯವನ್ನು ನೆನೆದು ಕೊರಗುವುದಕ್ಕಿಂತ ನಿಮ್ಮ ಇರುವ ಭಾಗ್ಯವನ್ನು ನೆನೆದು ಸಂತೋಷಪಡಿ. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ನಿಮ್ಮ ರಾಜಕೀಯ ಅಸ್ತ್ರವನ್ನು ವಿರೋಧಿಗಳ ಮೇಲೆ ಪ್ರಹಾರ ಮಾಡಬಹುದು. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

Leave a Reply

Your email address will not be published. Required fields are marked *