Sat. Apr 19th, 2025

Ujire: (ಡಿ.10 – ಡಿ.11) ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಉಜಿರೆ:(ಡಿ.9) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.10 ಹಾಗೂ 11 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಲಿದೆ.

ಇದನ್ನೂ ಓದಿ: Kerala: ಎರಡು ವರ್ಷದ ಪ್ರೀತಿ – ಮನೆಯವರು ಒಪ್ಪದಿದ್ದಕ್ಕೆ ಓಡಿಹೋಗಿ ಮದುವೆ

ಡಿ.10 ರಂದು ಮಧ್ಯಾಹ್ನ 2.30 ಘಂಟೆಗೆ ವಾರ್ಷಿಕೋತ್ಸವ ಪುರಸ್ಕಾರ ಸಮಾರಂಭ ನಡೆಯಲಿದೆ. ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಧರ್ಮದರ್ಶಿ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎ. ಕುಮಾರ ಹೆಗ್ಡೆ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

ಡಿ.11 ರಂದು ಬೆಳಗ್ಗೆ 11 ಘಂಟೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಅವರ ಅಧ್ಯಕ್ಷತೆಯಲ್ಲಿ ‘ ಆರೋಹಣಮ್ ‘ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು ಅಂದು ಚಲನಚಿತ್ರ ಹಾಗೂ ಧಾರಾವಾಹಿಯ ಖ್ಯಾತ ನಟಿ ಅನ್ವಿತಾ ಸಾಗರ್ ಅಭ್ಯಾಗತರಾಗಿ ಆಗಮಿಸಲಿದ್ದಾರೆ.

ಎರಡು ದಿನಗಳಲ್ಲಿಯೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾಚಾರ್ಯ ಪ್ರಮೋದ್ ಕುಮಾರ್. ಬಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *