Fri. Dec 27th, 2024

Uppinangadi: ಅನ್ಯ ರಾಜ್ಯದ ಕಾರ್ಮಿಕನ ಕೊಲೆ ಪ್ರಕರಣ – ಕಲ್ಮಂಜ ನಿವಾಸಿ ಆರೋಪಿಯ ಬಂಧನ

ಉಪ್ಪಿನಂಗಡಿ:(ಡಿ.11) ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಸಮೀಪ ನಡೆದ ಕೊಲೆ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ನಿವಾಸಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮೂಡುಬಿದಿರೆ: 30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ


ಬಂದಿತ ಆರೋಪಿ ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಅಂಚೆ ಕಲ್ಮಂಜ ಗ್ರಾಮ,ನಿವಾಸಿ ಬಾಬು ಯಾನೆ ರುದ್ರ (68) ಎಂಬಾತನಾಗಿದ್ದಾನೆ. ಈತನನ್ನು ಉಳ್ಳಾಲ ತಾಲೂಕಿನ ದೇರಳಕಟ್ಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನಲೆ;
ಡಿ 4 ರಂದು ಉಪ್ಪಿನಂಗಡಿ ಯ ಹೊಸ ಬಸ್ ನಿಲ್ದಾಣದ ಹಿಂಬದಿಯ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅನ್ಯ ರಾಜ್ಯದ ಕಾರ್ಮಿಕನೊಬ್ಬನ ಮೃತದೇಹ ಕಂಡು ಬಂದಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.


ತನಿಖೆಯ ಆರಂಭದಲ್ಲಿ ಲಭಿಸಿದ ಸುಳಿವಿನ ಬೆನ್ನು ಹತ್ತಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ. ಪಿ. ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್, ಕೆ. ಎಸ್. ಪಿ. ಎಸ್ ರವರ ನಿರ್ದೇಶನದಂತೆ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ಗೌಡರವರ ಮಾರ್ಗದರ್ಶನದಲ್ಲಿ,

ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ. ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅವಿನಾಶ್ ಹೆಚ್, ಸಿಬ್ಬಂದಿಗಳಾದ ಶಿವರಾಮ್, ಗಿರೀಶ್, ರಾಮಣ್ಣ ಗೌಡ, ಹೇಮರಾಜ್, ಮಹದೇವ, ನಾಗರಾಜ್, ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಪ್ರವೀಣ್ ರೈ, ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿ ಹರಿಶ್ಚಂದ್ರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ದಿವಾಕರ್ ರವರುಗಳ ವಿಶೇಷ ತಂಡ ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published. Required fields are marked *