Tue. Jan 14th, 2025

Allu Arjun Arrest: ನಟ ಅಲ್ಲು ಅರ್ಜುನ್‌ ಅರೆಸ್ಟ್‌ – ಪ್ರಕರಣ ಏನು?!

Allu Arjun Arrest:(ಡಿ.13) ತೆಲುಗು ಚಿತ್ರರಂಗದ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್​ನ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಒಬ್ಬ ಮಹಿಳೆಯ ನಿಧನಕ್ಕೆ ಕಾರಣವಾದ ಆರೋಪದ ಮೇಲೆ ಅಲ್ಲು ಅರ್ಜುನ್ ಅನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದ ಎರಡು ತೆಲುಗು ರಾಜ್ಯಗಳ ಅಲ್ಲು ಅರ್ಜುನ್ ಅಭಿಮಾನಿಗಳು, ಸಿನಿಮಾ ರಂಗದ ಪ್ರಮುಖರು ಆಘಾತಗೊಂಡಿದ್ದಾರೆ.

ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

Leave a Reply

Your email address will not be published. Required fields are marked *