Fri. Dec 27th, 2024

Belthangady: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳ್ತಂಗಡಿ:(ಡಿ.13) ವಿದ್ವತ್ ಪಿಯು ಕಾಲೇಜು ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Mangaluru: ಗ್ಯಾಸ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು

ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ,

ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.

Leave a Reply

Your email address will not be published. Required fields are marked *