Drone Pratap:(ಡಿ.16) ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಉಳ್ಳಾಲ: ಪಿಂಡ ಪ್ರಧಾನ ವೇಳೆ ಸಮುದ್ರ ಪಾಲಾದ ಮಹಿಳೆ
3 ದಿನ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಿಡಿಗೇಶಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ನ್ಯಾಯಾಲಯಕ್ಕೆ ಕರೆತರುವ ಮುನ್ನ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಡ್ರೋನ್ ಪ್ರತಾಪ್‌ಗೆ ಆರೋಗ್ಯ ತಪಾಸಣೆ ಮಾಡಲಾಗಿತ್ತು. ಕೋರ್ಟ್ ಡಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್‌ನನ್ನು ಮಧುಗಿರಿ ಸಬ್ ಜೈಲಿಗೆ ಕರೆದೊಯ್ಯಲಾಗುತ್ತದೆ.
ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಸ್ನೇಹಿತರಾದ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.