ಅಂಕೋಲಾ:(ಡಿ.17) ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಯೋ ಸಹಜ ಖಾಯಿಲೆಯಿಂದ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಛತ್ತರ್‌ಪುರ: ಫಸ್ಟ್‌ನೈಟ್‌ನಲ್ಲಿ ಹೆಂಡ್ತಿ ಮಾಡಿದ ಎಡವಟ್ಟಿಗೆ ಆಸ್ಪತ್ರೆ ಸೇರಿದ ಪತಿ!!
ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ (86) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಸುಬ್ರಾಯ, ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇವರು ತಮ್ಮ ಜೀವಿತಾವಧಿಯಲ್ಲಿ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದೇ ಖ್ಯಾತರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ
ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದರು.