ಸುಳ್ಯ :(ಡಿ.17) ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇದನ್ನೂ ಓದಿ: Pavi Poovappa : ಸಾಕಿದ ನಾಯಿಗೋಸ್ಕರ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಪವಿ ಪೂವಪ್ಪ!!
ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
“ಓಂ ಶಾಂತಿ ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಅಣ್ಣ” ಎಂದು ವಾಟ್ಸಾಪ್ ಗೆ ಸ್ಟೇಟಸ್ ಹಾಕಿ ಮನೆಯ ಸಮೀಪವಿರುವ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುರುಷೋತ್ತಮ್ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಪತ್ನಿ ಹಾಗೂ ಇಬ್ಬರ ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.