ಮಂಗಳೂರು(ಜು.14): ಮಂಗಳೂರು ಹೃದಯ ಭಾಗದಲ್ಲಿರುವ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದಿಂದ
ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ನಿರ್ಮಾಣ ಹಂತದ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ:https://uplustv.com/2024/07/14/mangalore-ಬುರ್ಖಾ-ಧರಿಸಿ-ಆ್ಯಸಿಡ್-ಎರಚಿ-
ಸಚಿವರನ್ನು ಸಂಘದ ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಮಾಡಿಕೊಂಡರು.
ಭೇಟಿ ವೇಳೆ ಸಂಘದ ಪದಾಧಿಕಾರಿಗಳು, ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದಿಂದ ಧನ ಸಹಾಯ ನೀಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಶರಣ ಎಚ್. ಎಸ್, ಗುರುಮೂರ್ತಿ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.