ಮಂಗಳೂರು:(ಡಿ.20) ವಿಚಾರಣಾಧೀನ ಖೈದಿಯ ಮೇಲೆ ಸಹ ಖೈದಿಯಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಸಫ್ವಾನ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಅಕ್ಟೋಬರ್‌ನಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅದರಂತೆ ಆರೋಪಿ ಸಫ್ವಾನ್ ನ್ಯಾಯಾಂಗ ಬಂಧನದಲ್ಲಿದ್ದ. ಈ ಸಂದರ್ಭ ಬೆಳ್ತಂಗಡಿಯ ರಿಝಾನ್ ಎಂಬಾತ ಸಫಾನ್ ಗೆ ಹಲ್ಲೆಗೈದಿದ್ದ ಎನ್ನಲಾಗಿದೆ.
ನ.28ರಂದು ಸಫ್ವಾನ್ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಗೊಂಡಿದ್ದು, ಆ ಬಳಿಕ ಆತ ಪರೀಕ್ಷೆ ಬರೆದಿದ್ದ.
ಕೆಲವು ದಿನಗಳ ಹಿಂದೆ ಜೈಲಿನಲ್ಲಿ ನಡೆದ ಹಲ್ಲೆಯಿಂದ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿ ಸಫ್ವಾನ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ ಸಫ್ವಾನ್ ನೀಡಿದ ದೂರಿನಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.