Fri. Dec 27th, 2024

Surathkal: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ನಡಿಗೆ ಸಿಲುಕಿ ಬೈಕ್ ಸವಾರ ಸಾವು!

ಸುರತ್ಕಲ್ :(ಡಿ.21) ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಡಿ.20 ಶುಕ್ರವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: ಪುತ್ತೂರು: ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!

ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ.

ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದರೆನ್ನಲಾಗಿದೆ.

ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನು ಗಮನಿಸಿದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *