ಬೆಳ್ತಂಗಡಿ:(ಜು.14) ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ.14 ರಂದು ಆಯೋಜಿಸಲಾಗಿತ್ತು.
ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.
ಇದನ್ನೂ ಓದಿ: https://uplustv.com/2024/07/14/beltangadi-ಬೆಳೆ-ವಿಮೆ-
ಡಾ|ಅಪೂರ್ವ ದಂತವೈದ್ಯರು, ಡಾ|ಅಝ್ಮಾಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.
140ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಯೆನಪೋಯ ಸಂಸ್ಥೆಯ ವೈದ್ಯಕೀಯ ಶಿಬಿರದ ಸಂಯೋಜಕರಾದ ಶ್ರೀಮತಿ ಗಾಯತ್ರಿ ವಿ.ಪಿ.ಯವರು, ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಗೋಪಿಕೃಷ್ಣರವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.