Tue. Jan 14th, 2025

Belthangady: ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು

ಬೆಳ್ತಂಗಡಿ:(ಡಿ.24) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.

ಇದನ್ನೂ ಓದಿ: ಮಂಗಳೂರು: ಪಿಲಿಕುಲದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ ಹುಲಿ “ರಾಣಿ”

ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು , ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು ,

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು , ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು ,

ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು ,

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.

ಈ ಮೇಲಿನ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *