Sat. Dec 28th, 2024

Love Jihad: ಲವ್ ಜಿಹಾದ್ ಗೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹಿಂದು ಯುವತಿ!!!!

Love Jihad:(ಡಿ.24) ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕನು ಹಿಂದೂ ಯುವತಿಯೊಬ್ಬಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯನ್ನು ಬಲವಂತವಾಗಿ ಮತಾಂತರಿಸಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿ : ಕೆ.ಎಸ್. ಆರ್‌.ಟಿ.ಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ


ಫರಾಜ್ ಆಕೆಯಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ವಂಚಿಸಿದ್ದನು. ಅವನು ಯುವತಿಗೆ ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಿದ್ದನು. ಇದೆಲ್ಲದರಿಂದ ಬೇಸತ್ತ ಯುವತಿ ಕೊನೆಗೆ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣದಲ್ಲಿ ಮೃತ ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫರಾಜ್ ಅತ್ತಾರ ಹಾಗೂ ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮೃತ ಯುವತಿಯ ತಂದೆ ಕೋಟ್ಯಾಧಿಪತಿಯಾಗಿದ್ದು ಅವರ ಆಸ್ತಿಯೆಲ್ಲ ಈ ಯುವತಿಯ ಹೆಸರಿನಲ್ಲಿತ್ತು. ಈ ಆಸ್ತಿಯನ್ನು ದೋಚುವ ಸಲುವಾಗಿ ಫರಾಜ್ ಈ ಹಿಂದೂ ಯುವತಿಯನ್ನು ತನ್ನ ಪ್ರೀತಿಯ ಬಲೆಗೆ ಬೀಳಿಸಿದ್ದನು.

ನಾನು ಅವಿವಾಹಿತನೆಂದು ಹೇಳಿ ಆಕೆಗೆ ಮದುವೆಯ ಭರವಸೆ ನೀಡಿದ್ದನು. ಫರಾಜ್ ಯುವತಿಯ ಜೊತೆ ದೈಹಿಕ ಸಂಬಂಧ ಹೊಂದಿದ್ದನು. ಅನೇಕ ಬಾರಿ ಆಕೆಗೆ ಗರ್ಭಪಾತ ಮಾಡಿಸಿದ್ದನು.

ಅಲ್ಲದೇ ಯುವತಿಯನ್ನು ಮತಾಂತರಿಸಲು ಇಸ್ಲಾಂ ಪುಸ್ತಕವನ್ನು ಓದುವಂತೆ ಒತ್ತಾಯಿಸುತ್ತಿದ್ದನು. ‘ಆಸ್ತಿಯೆಲ್ಲ ನನ್ನ ಹೆಸರಿಗೆ ಬಂದ ನಂತರವೇ ಮದುವೆಯಾಗುತ್ತೇನೆ’ ಎಂದು ಡಿಸೆಂಬರ್ 10ರಂದು ಆ ಹಿಂದೂ ಯುವತಿಗೆ ಷರತ್ತು ಹಾಕಿದ್ದನು. ಇದರಿಂದ ಬೇಸತ್ತ ಯುವತಿ ಡಿಸೆಂಬರ್ 11ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *