Sun. Dec 29th, 2024

Puttur: ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ದುರ್ಮರಣ

ಪುತ್ತೂರು:(ಡಿ.28) ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವುದು ಖಚಿತವಾಗಿದೆ.

ಇದನ್ನೂ ಓದಿ : ಮಂಗಳೂರು: ಆರ್‌ ಪಿ ಸಿ ಆನ್ಲೈನ್‌ ವಂಚನೆಗೆ 24 ರ ಯುವಕ ಬಲಿ

ಮೃತರಾದವರನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಂದೆ-ಮಗ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

ಇವರು ತಮ್ಮ ಆಲ್ಟೋ ಕಾರಿನಲ್ಲಿ ಗೋಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು. ಹಿಂತಿರುಗು ವೇಳೆ ಮುಂಜಾನೆ 4.15ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಅಣ್ಣು ನಾಯ್ಕ, ಅವರ ಪುತ್ರ ಚಿದಾನಂದ ಹಾಗೂ ನೆರೆಮನೆಯ ರಮೇಶ್ ನಾಯ್ಕ ಮೃತರಾದವರು. ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯ ಸಬ್ ಇನ್ಸೆಕ್ಟರ್ ಉದಯ ರವಿ ಹಾಗೂ ಎಫ್.ಎಸ್.ಐ. ಎಲ್ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *