ಬೆಳ್ತಂಗಡಿ:(ಜ.2) ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದೆಯೆಂದು ಶಾಸಕ ಹರೀಶ್ ಪೂಂಜ ತಿಳಿಸಿರುತ್ತಾರೆ.
ಇದನ್ನೂ ಓದಿ: ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ನಲ್ಲಿ ಹೊಸವರ್ಷ ಆಚರಣೆ
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮರಕಡದಿಂದ ಪುದುವೆಟ್ಟು ಗ್ರಾಮದ ಮಿಯ್ಯಾರು ಸಂಪರ್ಕ ರಸ್ತೆ ಅಭಿವೃದ್ಧಿ – ರೂ.4.00 ಕೋಟಿ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ – ತೋಟತ್ತಾಡಿ – ಚಿಬಿದ್ರೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.2.00 ಕೋಟಿ
ಬೆಳ್ತಂಗಡಿ ತಾಲೂಕಿನ ಪುಯ್ಯ – ಉಳಿಯ – ಕಂಚಿನಡ್ಕ – ಮುರ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.1.00 ಕೋಟಿ
ಬೆಳ್ತಂಗಡಿ ತಾಲೂಕಿನ ನಾರಾವಿ – ಪಾಣಾಲು – ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ – ರೂ.1.00 ಕೋಟಿ
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮುಂಡಾಜೆ ರಸ್ತೆಯಲ್ಲಿ ಆಯ್ದ ಭಾಗಗಳಲ್ಲಿ ಸೇತುವೆ ನಿರ್ಮಾಣ – ರೂ.3.75 ಕೋಟಿ
ಬೆಳ್ತಂಗಡಿ ತಾಲೂಕಿನ ಉಜಿರೆ – ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ – ರೂ.2.50 ಕೋಟಿ
ಬಿಡುಗಡೆಗೊಂಡಿದ್ದು ಶೀಘ್ರವೇ ಕಾಮಗಾರಿ ಚಾಲನೆಯಾಗಲಿದೆಯೆಂದು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.